Thursday, November 4, 2010

ಬಣ್ಣದ ತಗಡಿನ ತುತ್ತೂರಿ

ರಚನೆ: ಜಿ.ಪಿ. ರಾಜರತ್ನಂ

ಬಣ್ಣದ ತಗಡಿನ ತುತ್ತೂರಿ
ಕಾಸಿಗೆ ಕೊಂಡನು ಕಸ್ತೂರಿ
ಸರಿಗಮಪದನಿಸ ಊದಿದನು
ಸನಿದಮಮಗರಿಸ ಊದಿದನು

ತನಗೆ ತುತ್ತೂರಿ ಇದೆಯೆಂದ
ಬೇರಾರಿಗೂ ಅದು ಇಲ್ಲೆಂದ
ತುತ್ತೂರಿ ಊದಿದ ಕೊಳದ ಬಳಿ
ಕಸ್ತೂರಿ ನಡೆದನು ಬೀದಿಯಲಿ
ಜಂಬದ ಕೋಳಿಯ ರೀತಿಯಲಿ

ಜಾರಿತು ನೀರಿಗೆ ತುತ್ತೂರಿ
ಗಂಟಲು ಕಟ್ಟಿತು ನೀರೂರಿ
ಸರಿಗಮ ಊದಲು ನೋಡಿದನು
ಗಗ ಗಗ ಸದ್ದನು ಮಾಡಿದನು
ಬಣ್ಣವು ನೀರಿನ ಪಾಲಾಯ್ತು
ಜಂಬದ ಕೋಲಿಗೆ ಗೋಳಾಯ್ತು

No comments: